
ಪಶ್ಚಿಮಬಂಗಾಳದ ಭಿರ್‌ಭೂಮ್ ಜಿಲ್ಲೆಯ ತಾರಾಪೀಠದಲ್ಲಿರುವ ಹೋಟೆಲ್‌ನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ.
ನಾಲ್ಕು ಅಂತಸ್ತಿನ ಕಟ್ಟಡದ ಕೆಳ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಾಗ ಒಟ್ಟು 43 ಮಂದಿ ಹೋಟೆಲ್‌ನಲ್ಲಿದ್ದರು, ಅದರಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿದ್ಯುತ್ ಸರಬರಾಜು ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದ್ದು, ಅಗ್ನಿನಿಯಂತ್ರಣ ವ್ಯವಸ್ಥೆಯ ನಿರ್ವಹಣೆಯಲ್ಲಿ ಲೋಪ ಎಸಗಿದ ಆರೋಪದ ಮೇಲೆ ಒಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.