
ಆಗಸ್ಟ್ 12ರಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30-50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ 29 ಡಿಗ್ರಿ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ಪ್ರಸಕ್ತ ಮುಂಗಾರು ಋತುವಿನಲ್ಲಿ ದೇಶಾದ್ಯಂತ ಸರಾಸರಿಗಿಂತ 12% ಕಡಿಮೆ ಮಳೆಯಾಗಿದ್ದು, ದಕ್ಷಿಣ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಮಳೆ ಕೊರತೆ 34% ರಷ್ಟಿದೆ.