
ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಕೆಇಎ ಕ್ರಮ ಕೈಗೊಂಡಿದ್ದು, ಅಭ್ಯರ್ಥಿಗಳು ಆಧಾರ್ ಸಂಖ್ಯೆ ನಮೂದಿಸುವಾಗ ಎಚ್ಚರಿಕೆ ವಹಿಸುವಂತೆ ನಿರ್ದೇಶಕ ಎಚ್. ಪ್ರಸನ್ನ ಸೂಚಿಸಿದ್ದಾರೆ.
ಪರೀಕ್ಷೆ ಮುಗಿದ ತಕ್ಷಣ ಕಲಬುರಗಿ, ರಾಯಚೂರು, ಧಾರವಾಡ, ದಾವಣಗೆರೆ ಮತ್ತು ಮೈಸೂರು ಕೇಂದ್ರಗಳಲ್ಲಿ ಓಎಂಆರ್ ಶೀಟ್‌ಗಳನ್ನು ಸ್ಕ್ಯಾನ್ ಮಾಡಿ ಮಧ್ಯರಾತ್ರಿಯೊಳಗೆ ವೆಬ್‌ಸೈಟ್‌ನಲ್ಲಿ ಲೈವ್ ಮಾಡಲಾಗುವುದು.
ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್‌ನಲ್ಲಿ ತಪ್ಪು ಮಾಹಿತಿ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಕೆಇಎ ಮೇಲೆ ಸುಳ್ಳು ಆರೋಪ ಮಾಡಿದರೆ ಅಂತಹವರ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ.