
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧ ಪಕ್ಷಗಳು ಪ್ರಶ್ನಿಸಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ.
ಜೂನ್ 2025, ಅಕ್ಟೋಬರ್ 2025 ಮತ್ತು ಮೇ 2026ರಲ್ಲಿ ಹೊರಡಿಸಲಾದ ಎಲ್ಲಾ ಮೂರು ಎಸ್‌ಐಆರ್ ಆದೇಶಗಳನ್ನು ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇಬ್ಬರು ಚುನಾವಣಾ ಆಯುಕ್ತರು ಸರ್ವಾನುಮತದಿಂದ ಅನುಮೋದಿಸಿದ್ದಾರೆ ಎಂದು ಆಯೋಗ ತಿಳಿಸಿದೆ.
ಮತದಾರರ ನೋಂದಣಿಗೆ ಬಳಸುವ ಫಾರ್ಮ್ 6 ಅನ್ನು ತಿದ್ದುಪಡಿ ಮಾಡಿಲ್ಲವೆಂದು ಸ್ಪಷ್ಟಪಡಿಸಿರುವ ಆಯೋಗ, ಮ್ಯಾಪಿಂಗ್ ಆಗದ ಮತದಾರರ ಮನೆಗಳಿಗೇ ಬಿಎಲ್‌ಒ ಅಧಿಕಾರಿಗಳು ತೆರಳಿ ದಾಖಲೆ ಸಂಗ್ರಹಿಸಲಿದ್ದಾರೆ ಎಂದು ತಿಳಿಸಿದೆ.