
ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ನಲ್ಲಿ 2.28 ಕಿಲೋಮೀಟರ್ ಉದ್ದದ ಟನಲ್ ರಸ್ತೆ ನಿರ್ಮಿಸುವ ಸರ್ಕಾರದ ಯೋಜನೆಯು ಅವೈಜ್ಞಾನಿಕ ಎಂದು ಐಐಎಸ್ಸಿ ತಜ್ಞರ ತಂಡ ರಾಜ್ಯಪಾಲರಿಗೆ ವರದಿ ನೀಡಿದೆ.
ಈ ಯೋಜನೆಯಿಂದ ಟ್ರಾಫಿಕ್ ಸಮಸ್ಯೆ ಬಗೆಹರಿಯುವ ಬದಲು ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್‌ಗಳಲ್ಲಿ ದಟ್ಟಣೆ ಹೆಚ್ಚಾಗಲಿದ್ದು, ಅಂದಾಜು ವೆಚ್ಚವು ಆರು ಪಟ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಹೆಬ್ಬಾಳ ಕೆರೆಯ ಕ್ಯಾಚ್‌ಮೆಂಟ್ ಪ್ರದೇಶದಲ್ಲಿ ಸುರಂಗ ನಿರ್ಮಿಸುವುದರಿಂದ ಮಳೆಗಾಲದಲ್ಲಿ ಪ್ರವಾಹದ ಭೀತಿ ಉಂಟಾಗಲಿದ್ದು, ತಕ್ಷಣ ಕಾಮಗಾರಿಯನ್ನು ತಡೆಹಿಡಿಯುವಂತೆ ತಜ್ಞರು ಮನವಿ ಮಾಡಿದ್ದಾರೆ.