
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಅಕ್ಟೋಬರ್ ಅಂತ್ಯದವರೆಗೆ ದೇಶದಲ್ಲಿ ಕೃಷಿ ಬಿತ್ತನೆ ಪ್ರದೇಶ ಶೇ 46ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಗೋಧಿ, ದ್ವಿದಳ ಧಾನ್ಯಗಳು ಮತ್ತು ಎಣ್ಣೆಕಾಳುಗಳ ಬಿತ್ತನೆಯಲ್ಲಿ ಭಾರಿ ಇಳಿಕೆ ಕಂಡುಬಂದಿದ್ದು, ಗೊಬ್ಬರ ಮತ್ತು ಬೀಜಗಳ ದಾಸ್ತಾನು ಸಮರ್ಪಕವಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಹಿಂಗಾರು ಬಿತ್ತನೆಗೆ ಡಿಸೆಂಬರ್ವರೆಗೂ ಅವಕಾಶವಿರುವುದರಿಂದ ಈಗಲೇ ಬಿತ್ತನೆ ಕುಸಿತದ ಬಗ್ಗೆ ಕಳವಳ ಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿ ಪ್ರತಿಕ್ರಿಯಿಸಿದ್ದಾರೆ.