
ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ತಾವರೇಘಟ್ಟ ಗ್ರಾಮದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಡಾಂಬರ್ ರಸ್ತೆ ಕೇವಲ ಎರಡು ತಿಂಗಳಲ್ಲಿ ಕಿತ್ತುಹೋಗಿದೆ.
ಮುತ್ತಿನಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಾಣವಾದ ಈ ರಸ್ತೆಯ ಗುಣಮಟ್ಟದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊರಕೆಯಿಂದ ಗುಡಿಸಿದರೂ ಜಲ್ಲಿ ಕಲ್ಲುಗಳು ಕಿತ್ತು ಬರುತ್ತಿವೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಟ್ಯಂತರ ರೂಪಾಯಿ ವೆಚ್ಚದ ಕಾಮಗಾರಿ ಕಳಪೆಯಾಗಿದ್ದು, ಸಾರ್ವಜನಿಕರ ತೆರಿಗೆ ಹಣ ಪೋಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.