
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣನ ಸೆಲ್‌ನಲ್ಲಿ ಮೊಬೈಲ್ ಮತ್ತು ಪೆನ್ ಡ್ರೈವ್ ಪತ್ತೆಯಾದ ಹಿನ್ನೆಲೆಯಲ್ಲಿ ಡಿಜಿಪಿ ಅಲೋಕ್ ಕುಮಾರ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜೈಲಾಧಿಕಾರಿಗಳ ಸಭೆ ನಡೆಸಿದ ಅಲೋಕ್ ಕುಮಾರ್, ನಿಷೇಧಿತ ವಸ್ತುಗಳು ಬ್ಯಾರಕ್ ಒಳಗೆ ಹೇಗೆ ಬಂದವು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಕ್ರಮಗಳಿಗೆ ಕಡಿವಾಣ ಹಾಕಲು ಸೂಚನೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿರುವ ಪ್ರಕರಣದ ಬಗ್ಗೆ ಸಿಸಿಬಿ ತನಿಖೆ ನಡೆಸುತ್ತಿದ್ದು, ತನಿಖೆ ಮುಗಿದ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ಡಿಜಿಪಿ ತಿಳಿಸಿದ್ದಾರೆ.