
ಪಶ್ಚಿಮ ಬಂಗಾಳದ ಬಿರ್ಭಮ್ ಜಿಲ್ಲೆಯಲ್ಲಿ ನಿವೃತ್ತ ಸರ್ಕಾರಿ ಬಸ್ ಚಾಲಕ ಮಿನಾರ್ ಎಂಬುವವರ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ 28.5 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ.
ದಾಳಿಯ ವೇಳೆ 15 ಕೆ.ಜಿ. ಚಿನ್ನಾಭರಣಗಳು ಪತ್ತೆಯಾಗಿದ್ದು, ಇದರ ಮೌಲ್ಯ ಮಾರುಕಟ್ಟೆಯಲ್ಲಿ 20 ಕೋಟಿ ರೂ. ದಾಟಲಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಮಿನಾರ್ ತೃಣಮೂಲ ಕಾಂಗ್ರೆಸ್ ಮುಖಂಡ ಅನುಬ್ರತಾ ಮೊಂಡಲ್ ಅವರ ಆಪ್ತ ಟಿಲ್ಲು ಮೊಂಡಲ್ನ ಸೋದರ ಮಾವನಾಗಿದ್ದು, ಈ ಅಕ್ರಮ ಸಂಪತ್ತಿನ ಕುರಿತು ಆತನನ್ನು ಮತ್ತು ಮಗನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.