
ಕರ್ನಾಟಕದಲ್ಲಿ 2026ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ.
ಬಿಡುಗಡೆಗೊಂಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಮೊದಲ ಸುತ್ತಿನಲ್ಲಿ ಒಟ್ಟು 3,268 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಹಂಚಿಕೆಯಾಗಿದೆ.
ಸೀಟು ಹಂಚಿಕೆಯಾದ ಅಭ್ಯರ್ಥಿಗಳು ನವೆಂಬರ್ 11ರವರೆಗೆ ಆನ್‌ಲೈನ್ ಮೂಲಕ ಸೂಕ್ತ ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದ್ದು, ನಿಗದಿತ ದಿನಾಂಕಗಳೊಳಗೆ ಶುಲ್ಕ ಪಾವತಿಸಿ ದಾಖಲೆ ಪರಿಶೀಲನೆಗೆ ಹಾಜರಾಗಬೇಕು.