
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು-ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕದಲ್ಲಿ ಆಗಸ್ಟ್ 23 ಮತ್ತು 24ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಗಲಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.