
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕ್ಟೋಬರ್ 5ರವರೆಗೆ ಒಣ ಹವಾಮಾನ ಹಾಗೂ ಅಧಿಕ ತಾಪಮಾನ ಮುಂದುವರಿಯಲಿದ್ದು, ಮಳೆಯಾಗುವ ಮುನ್ಸೂಚನೆ ಇಲ್ಲ.
ದಕ್ಷಿಣ ಭಾರತದ ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು ಹಾಗೂ ಕೇರಳ ಸೇರಿದಂತೆ ವಿವಿಧೆಡೆ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳ ಕೊಲ್ಲಿಯ ಈಶಾನ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ಈಶಾನ್ಯ ಮತ್ತು ದಕ್ಷಿಣ ರಾಜ್ಯಗಳಲ್ಲಿ ಮಳೆ ಚುರುಕಾಗಲಿದೆ ಎಂದು ಐಎಂಡಿ ತಿಳಿಸಿದೆ.