
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಪಣತ್ತೂರು ರೈಲ್ವೆ ಅಂಡರ್ಪಾಸ್ ಸಂಪೂರ್ಣವಾಗಿ ಜಲಾವೃತಗೊಂಡಿದೆ.
ನೀರು ಸರಾಗವಾಗಿ ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದಿರುವುದೇ ಈ ಪರಿಸ್ಥಿತಿಗೆ ಕಾರಣ ಎಂದು ಹೇಳಲಾಗಿದೆ.
ಅಂಡರ್ಪಾಸ್ನಲ್ಲಿ ಕಾರೊಂದು ನೀರಿನಲ್ಲಿ ತೇಲಾಡಿದ ಆತಂಕಕಾರಿ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.