
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತ ಕಸ್ತೂರಿರಂಗನ್ ವರದಿಯನ್ನು ಒಪ್ಪದಿರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಗ್ರಾಮ ಮಟ್ಟದಲ್ಲಿ ಸಮಿತಿ ರಚನೆಗೆ ಕ್ರಮ ಕೈಗೊಳ್ಳಲಾಗಿದೆ.
ಉಪಗ್ರಹ ದತ್ತಾಂಶದ ಆಧಾರದಲ್ಲಿ ಇಡೀ ಗ್ರಾಮಗಳನ್ನು ಸೂಕ್ಷ್ಮ ಪ್ರದೇಶವೆಂದು ಘೋಷಿಸುವುದನ್ನು ವಿರೋಧಿಸಿರುವ ಸರ್ಕಾರ, ಭೌತಿಕವಾಗಿ ಸರ್ವೆ ಮಾಡಲು ಕೇಂದ್ರಕ್ಕೆ ಮನವಿ ಮಾಡಿದೆ.
ಪರಿಣಿತರ ಸಮಿತಿಯನ್ನು ರಚಿಸಿ ವರದಿಯಲ್ಲಿನ ಲೋಪಗಳನ್ನು ಸರಿಪಡಿಸಲು ಮತ್ತು ಕೃಷಿ ಜಮೀನು, ಜನವಸತಿ ಪ್ರದೇಶಗಳನ್ನು ಸೂಕ್ಷ್ಮ ವಲಯದಿಂದ ಕೈಬಿಡಲು ಸರ್ಕಾರ ಒತ್ತಾಯಿಸಿದೆ.