
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 1,344ಕ್ಕೆ ಏರಿಕೆಯಾಗಿದ್ದು, ಸುಮಾರು 5,000 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ತೆಯಾದ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿರುವುದರಿಂದ ಗುರುತು ಪತ್ತೆಹಚ್ಚುವುದು ಕಷ್ಟವಾಗಿದ್ದು, ನಾಪತ್ತೆಯಾದವರ ಕುಟುಂಬಸ್ಥರಿಂದ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಬೆಲೆಬಾಳುವ ವಸ್ತುಗಳ ಮಾರಾಟ ಮತ್ತು ಖರೀದಿಯನ್ನು ನಿಷೇಧಿಸಲಾಗಿದ್ದು, ವಿದೇಶಿ ಪತ್ರಕರ್ತರು ವರದಿ ಮಾಡಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ.