
ಗುರುಮಠಕಲ್ ಮತ್ತು ಯಾದಗಿರಿ ಪ್ರದೇಶಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲು ಸರ್ಕಾರ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಸರ್ಕಾರ ಬಿಡುಗಡೆ ಮಾಡಿರುವ ಬರಪಟ್ಟಿಯಲ್ಲಿ ತಮ್ಮ ತಾಲೂಕುಗಳನ್ನು ಕೈಬಿಟ್ಟಿರುವುದರಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಆರೋಪಿಸಿದ ಶಾಸಕರು, ಕೂಡಲೇ ಪರಿಹಾರ ನೀಡುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರು ಭಾಗವಹಿಸಿ ಶಾಸಕರಿಗೆ ಬೆಂಬಲ ಸೂಚಿಸಿದ್ದು, ಸರ್ಕಾರದ ನಿಷ್ಕ್ರಿಯತೆಯನ್ನು ತೀವ್ರವಾಗಿ ಪ್ರಶ್ನಿಸಿದರು.