
ಕರ್ನಾಟಕ ಸರ್ಕಾರವು ಸರ್ಕಾರಿ ನಾಗರಿಕ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ ಶೇಕಡ 2ರಷ್ಟು ಮೀಸಲಾತಿ ಕಲ್ಪಿಸಿ ಅಧಿಕೃತ ಆದೇಶ ಹೊರಡಿಸಿದೆ.
ಕರ್ನಾಟಕ ಒಲಿಂಪಿಕ್ ಸಂಸ್ಥೆಯ ನಾಲ್ಕು ವರ್ಷಗಳ ಪ್ರಯತ್ನದ ಫಲವಾಗಿ ಈ ಆದೇಶ ಬಂದಿದ್ದು, ಅರಣ್ಯ ಮತ್ತು ಪೊಲೀಸ್ ಇಲಾಖೆಗಳಲ್ಲಿ ಶೇಕಡ 3ರಷ್ಟು ಮೀಸಲಾತಿ ನೀಡಲಾಗಿದೆ.
ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಿದ್ದು, ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಅರ್ಹ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆಯಲಿದ್ದಾರೆ.