
ಕರ್ನಾಟಕದಲ್ಲಿ ರೇಷನ್ ಕಾರ್ಡ್ ಇ-ಕೆವೈಸಿ ಪ್ರಕ್ರಿಯೆ ಸರ್ವರ್ ದೋಷದಿಂದ ವಿಳಂಬವಾಗಿದ್ದು, ಇದುವರೆಗೆ ಶೇ. 36.44ರಷ್ಟು ಮಾತ್ರ ಪೂರ್ಣಗೊಂಡಿದೆ.
ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಯಿಂದ ದಿನಗೂಲಿ ಕಾರ್ಮಿಕರು ದಿನದ ಕೂಲಿ ಬಿಟ್ಟು ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ ಎಂದು ಆರ್. ಅಶೋಕ್ ಟೀಕಿಸಿದ್ದಾರೆ.
ಸಮಸ್ಯೆಯನ್ನು ತಕ್ಷಣ ಬಗೆಹರಿಸಿ ಕೆವೈಸಿ ಪೂರ್ಣಗೊಳಿಸಲು ಸೂಕ್ತ ವ್ಯವಸ್ಥೆ ಮತ್ತು ಕಾಲಾವಕಾಶ ನೀಡುವಂತೆ ಅವರು ಆಗ್ರಹಿಸಿದ್ದಾರೆ.