
ನಾಗ್ಪುರದಲ್ಲಿ ನಡೆದ ಆರ್ಎಸ್ಎಸ್ 101ನೇ ಸ್ಥಾಪನಾ ದಿನದ ವಿಜಯದಶಮಿ ಕಾರ್ಯಕ್ರಮದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿ, ಬಾಂಗ್ಲಾದೇಶ ಮತ್ತು ಫ್ರಾನ್ಸ್ ಮಾದರಿಯಲ್ಲಿ ಭಾರತದಲ್ಲೂ ಆಡಳಿತ ಬದಲಾವಣೆ ಮಾಡಲು ಹಾಗೂ ದೇಶವನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಫ್ರಾನ್ಸ್, ಅಲ್ಬೇನಿಯಾ, ಬಾಂಗ್ಲಾದೇಶ ಮತ್ತು ನೇಪಾಳದ ರಾಜಕೀಯ ದಂಗೆಗಳನ್ನು ಉಲ್ಲೇಖಿಸಿದ ಅವರು, ಸ್ವಹಿತಾಸಕ್ತಿ ಹೊಂದಿರುವ ವಿದೇಶಿ ಶಕ್ತಿಗಳ ಏಜೆಂಟರು ಪ್ರಭಾವಶಾಲಿಯಾಗಿದ್ದು ದೇಶಗಳನ್ನು ಅಶಾಂತಗೊಳಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇಶದಲ್ಲಿ Gen-Z ನೆಪದಲ್ಲಿ ನಡೆಯುತ್ತಿರುವ ಹೋರಾಟಗಳ ಬಗ್ಗೆ ಎಚ್ಚೆತ್ತುಕೊಳ್ಳುವಂತೆ ಯುವಜನತೆಗೆ ಕರೆ ನೀಡಿದ ಅವರು, ಸಾಮಾಜಿಕ ಜಾಲತಾಣಗಳ ಯಾವುದೇ ಮಾಹಿತಿಯನ್ನು ಸತ್ಯವೇ ಎಂಬುದನ್ನು ಪರಿಶೀಲಿಸಿದ ನಂತರವಷ್ಟೇ ಒಪ್ಪಿಕೊಳ್ಳಬೇಕು ಎಂದರು.