
ಪೂರ್ವ ತೆಲಂಗಾಣ ಮತ್ತು ಪಕ್ಕದ ಕರಾವಳಿ ಆಂಧ್ರಪ್ರದೇಶದ ಮೇಲೆ ನೆಲೆಗೊಂಡಿದ್ದ ತೀವ್ರ ಚಂಡಮಾರುತ ಪ್ರಭಾವವು ಮುಂದುವರಿದಿದ್ದು, ಮುಂದಿನ 6 ಗಂಟೆಗಳಲ್ಲಿ ಮತ್ತಷ್ಟು ದುರ್ಬಲಗೊಂಡು ಕಡಿಮೆ ಒತ್ತಡದ ಪ್ರದೇಶವಾಗಿ ಬದಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವಾತಾವರಣದ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4 ಮತ್ತು 5 ರಂದು ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಜತೆಗೆ, ನವೆಂಬರ್ 4 ರಿಂದ 8 ರವರೆಗೆ ಕೇರಳ ಮತ್ತು ಮಾಹೆಯಲ್ಲಿ ಹಾಗೂ ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾದ ಕೆಲವು ಭಾಗಗಳಲ್ಲಿ ಹಗಲಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.