
ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಆಯೋಜಕರು ಜವಾಬ್ದಾರಿಯುತವಾಗಿ ವರ್ತಿಸುವಂತೆ ಸೂಚಿಸಿದ್ದಾರೆ.
ಗಣೇಶ ಕೂರಿಸಲು ಬೇರೆ ಇಲಾಖೆಗಳ ಅನುಮತಿ ಕಡ್ಡಾಯವಾಗಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲನೆ, ನಿಗದಿತ ಮಾರ್ಗದಲ್ಲಿ ಮೆರವಣಿಗೆ ಮತ್ತು ಸ್ವಯಂಸೇವಕರ ಪಟ್ಟಿ ನೀಡುವುದು ಕಡ್ಡಾಯವಾಗಿದೆ.
ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದು, ವಿಸರ್ಜನಾ ಸ್ಥಳಗಳಲ್ಲಿ ಡಿಸಿಪಿಗಳು ಮತ್ತು ಜಿಬಿಎ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.