
ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ (BNP) ಹಿರಿಯ ನಾಯಕ, 78 ವರ್ಷದ ಮಿರ್ಜಾ ಫಕ್ರುಲ್ ಇಸ್ಲಾಂ ಅಲಂಗೀರ್ ಬಾಂಗ್ಲಾದೇಶದ 23ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅರ್ಥಶಾಸ್ತ್ರ ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದ್ದ ಅಲಂಗೀರ್, 1990ರ ದಶಕದಲ್ಲಿ ಬಿಎನ್ಪಿ ಸೇರಿ ಕೃಷಿ ಮತ್ತು ನಾಗರಿಕ ವಿಮಾನಯಾನ ಸಚಿವಾಲಯಗಳಲ್ಲಿ ಸಹಾಯಕ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಭಾರತದೊಂದಿಗೆ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ನಿಲುವು ಹೊಂದಿರುವ ಅವರು, ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಹಲವು ಬಾರಿ ಒತ್ತಾಯಿಸಿದ್ದಾರೆ.