
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ರೈತರ ವಿರೋಧದ ನಡುವೆಯೂ ಸರ್ಕಾರ 15,000 ಕೋಟಿ ಲಾಭಕ್ಕಾಗಿ ಬಿಡದಿ ಟೌನ್ಶಿಪ್ ಯೋಜನೆ ಜಾರಿಗೆ ತರುತ್ತಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಸಭೆಯಲ್ಲಿ ದೇವೇಗೌಡರು ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಭಾಗವಹಿಸಿದ್ದು, ನೈಸ್ ಯೋಜನೆಯ ಅಕ್ರಮ ಟೋಲ್ ವಸೂಲಿಯನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ರೈತರ ಭೂಮಿಯನ್ನು ಕಸಿದುಕೊಂಡು 25 ವರ್ಷಗಳಿಂದ ನ್ಯಾಯ ಒದಗಿಸದ ನೈಸ್ ಪ್ರಾಜೆಕ್ಟ್ ಅನ್ನು ರಾಜ್ಯ ಸರ್ಕಾರ ತನ್ನ ವಶಕ್ಕೆ ಪಡೆಯಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.