ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ನದಿಗೆ 18 ಸಾವಿರ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದ್ದು, ಭಾಗಮಂಡಲ-ನಾಪೋಕ್ಲು ಮತ್ತು ಭಾಗಮಂಡಲ-ಮಡಿಕೇರಿ ರಸ್ತೆಗಳ ಮೇಲೆ ನೀರು ಹರಿಯುತ್ತಿರುವುದರಿಂದ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಮಡಿಕೇರಿ ನಗರಕ್ಕೆ ನೀರು ಪೂರೈಸುವ ಕೂಟುಹೊಳೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಗಂಡೇಶ್ವರ ದೇಗುಲದ ಆವರಣ ಮತ್ತು ನದಿ ತೀರದ ಉದ್ಯಾನಗಳು ಮುಳುಗಡೆಯಾಗಿವೆ.