
ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ವಿರೋಧ ಪಕ್ಷದ ಸಂಸದರನ್ನು ತಡೆದ ಪೊಲೀಸರು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂವಿಧಾನದ ಪ್ರತಿಯನ್ನು ಹಿಡಿದು ರಸ್ತೆಯಲ್ಲೇ ಮಲಗಿ ಪ್ರತಿಭಟಿಸುತ್ತಿದ್ದಾಗ, ಮಹಿಳಾ ಪೊಲೀಸ್ ಸಿಬ್ಬಂದಿ ಅವರನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಪೊಲೀಸ್ ಬಸ್ಗೆ ತುಂಬಿಸಿದ್ದಾರೆ.
ತಮ್ಮನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ನೆಲಕ್ಕೆ ದೂಡಿ ಮೈಯೆಲ್ಲಾ ಪರಚಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.