
ಹುಲಿಗಳ ಸಂರಕ್ಷಣೆಗಾಗಿ ಪ್ರತಿವರ್ಷ ಜುಲೈ 28ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತಿದ್ದು, 2010ರಲ್ಲಿ ರಷ್ಯಾದಲ್ಲಿ ನಡೆದ ಸಮ್ಮೇಳನದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು.
ಕರ್ನಾಟಕದಲ್ಲಿ ಬಂಡೀಪುರ, ನಾಗರಹೊಳೆ, ಕಾಳಿ, ಭದ್ರಾ ಮತ್ತು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶಗಳಿದ್ದು, ಇವುಗಳನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಯಂತೆ ನಿರ್ವಹಿಸಲಾಗುತ್ತದೆ.
ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇತ್ತೀಚಿನ ಗಣತಿಯ ಪ್ರಕಾರ 33 ಹುಲಿಗಳು ಮತ್ತು 22 ಚಿರತೆಗಳು ವಾಸಿಸುತ್ತಿದ್ದು, ಇದು ಜೀವವೈವಿಧ್ಯದ ಪ್ರಮುಖ ತಾಣವಾಗಿದೆ.