
ಗ್ಯಾರಂಟಿಗಳಿಗೆ ಹಣ ಸಂಪಾದಿಸಲು ಸಾಧ್ಯವಾಗದೆ ರಾಜ್ಯ ಸರ್ಕಾರವು ಅಬಕಾರಿ ಇಲಾಖೆಗೆ ಗುರಿ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ದಿನಸಿ ಅಂಗಡಿಯಲ್ಲೂ ಮದ್ಯ ಸಿಗುವಂತಾಗಿದೆ ಮತ್ತು ಕುಡುಕರ ರಾಜ್ಯ ಮಾಡಿದ್ದೇ ಸರ್ಕಾರದ ಸಾಧನೆಯಾಗಿದೆ ಎಂದು ಆರೋಪಿಸಿದ್ದಾರೆ.
ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ದೊಡ್ಡ ಅಂತರದಲ್ಲಿ ಜಯಗಳಿಸಿ ಹ್ಯಾಟ್ರಿಕ್ ಸಾಧನೆ ಮಾಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.