
ತುಮಕೂರು ನಗರಕ್ಕೆ ಜನವರಿವರೆಗೆ ಮಾತ್ರ ಹೇಮಾವತಿ ನೀರು ಲಭ್ಯವಿದ್ದು, ಮುಂದಿನ ಪರಿಸ್ಥಿತಿಗೆ ತುರ್ತು ಕಾರ್ಯಯೋಜನೆ ಸಿದ್ಧಪಡಿಸಲು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ 217 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದ್ದು, 177 ತಾಲೂಕುಗಳಿಗೆ ಸಂಬಂಧಿಸಿದಂತೆ ಅಂದಾಜು 46 ಸಾವಿರ ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿಸಲಾಗಿದೆ.
ಮುಂದಿನ ತಿಂಗಳುಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇರುವ ಕಾರಣ ಸಾರ್ವಜನಿಕರು ನೀರನ್ನು ಅತ್ಯಂತ ಮಿತವಾಗಿ ಬಳಸಬೇಕು ಎಂದು ಮನವಿ ಮಾಡಲಾಗಿದೆ.