
ಭಾರತದ 15 ವರ್ಷದ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯನ್ನು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಮುಕ್ತವಾಗಿ ಶ್ಲಾಘಿಸಿದ್ದಾರೆ.
ವೈಭವ್ ಅವರಿಗೆ ಟೆಸ್ಟ್ ಕ್ರಿಕೆಟ್‌ಗೆ ಇನ್ನು ಅನುಭವದ ಕೊರತೆಯಿದೆ ಎಂಬ ವಾದಗಳನ್ನು ತಳ್ಳಿಹಾಕಿರುವ ಹೇಡನ್, ಕೇವಲ ವಯಸ್ಸಿನ ಆಧಾರದ ಮೇಲೆ ಆಟಗಾರನ ಸಾಮರ್ಥ್ಯವನ್ನು ಅಳೆಯುವುದು ಸರಿಯಲ್ಲ ಎಂದು ಹೇಳಿದ್ದಾರೆ.
ತಮ್ಮ 14ನೇ ವಯಸ್ಸಿನಲ್ಲೇ ಐಪಿಎಲ್ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದೊಡ್ಡ ಮೊತ್ತಕ್ಕೆ ಆಯ್ಕೆಯಾಗಿದ್ದ ವೈಭವ್ ಅವರ ವೃತ್ತಿಜೀವನವನ್ನು ಬಿಸಿಸಿಐ ಮತ್ತು ರಾಜಸ್ಥಾನ್ ರಾಯಲ್ಸ್ ಎಚ್ಚರಿಕೆಯಿಂದ ರೂಪಿಸಬೇಕು ಎಂದು ಹೇಡನ್ ಸಲಹೆ ನೀಡಿದ್ದಾರೆ.