
ಹೈದರಾಬಾದ್ನ ನಲ್ಸಾರ್ ಕಾನೂನು ವಿಶ್ವವಿದ್ಯಾಲಯದ 2026ರ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಸಿಜೆಐ ಸೂರ್ಯ ಕಾಂತ್ ಅವರನ್ನು ಆಹ್ವಾನಿಸಿರುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿಜೆಐ ಅವರ ಇತ್ತೀಚಿನ ಹೇಳಿಕೆಗಳು ಶೈಕ್ಷಣಿಕ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿವೆ ಎಂದು ಆರೋಪಿಸಿ, ವಿದ್ಯಾರ್ಥಿಗಳು ಆಹ್ವಾನವನ್ನು ಮರುಪರಿಶೀಲಿಸುವಂತೆ ಉಪಕುಲಪತಿಗಳಿಗೆ ಪತ್ರ ಬರೆದಿದ್ದಾರೆ.
ಎರಡು ವಾರಗಳ ಹಿಂದೆ ಭದ್ರತಾ ಕಾರಣಗಳಿಂದಾಗಿ ಮುಂಬೈನ ಟಿಸ್ (TISS) ಸಂಸ್ಥೆಯ 86ನೇ ಘಟಿಕೋತ್ಸವ ಕಾರ್ಯಕ್ರಮವನ್ನು ಸಹ ಮುಂದೂಡಲಾಗಿತ್ತು.