
ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಎಡತೊರೆ ಗ್ರಾಮದಲ್ಲಿರುವ ಐತಿಹಾಸಿಕ ಅರ್ಕೇಶ್ವರ ದೇಗುಲದ ಆವರಣದ ಗೋಡೆ ಮೇಲೆ ಶಿಲುಬೆ ಮತ್ತು ಮಸೀದಿ ಚಿತ್ರಗಳು ಪತ್ತೆಯಾಗಿರುವುದು ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತಾಲೂಕು ಆಡಳಿತವು ಎಚ್ಚೆತ್ತುಕೊಂಡಿದ್ದು, ತಹಶೀಲ್ದಾರ್ ಸುರೇಂದ್ರ ಮೂರ್ತಿ ಅವರು ಪಾರುಪತ್ತೇದಾರ ಆರತಿ ಹಾಗೂ ಆರ್ಟಿಸ್ಟ್ ವಿನಯ್ ವಿರುದ್ಧ ದೂರು ದಾಖಲಿಸಿದ್ದಾರೆ.
ಈ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇಂತಹ ಚಿತ್ರಗಳನ್ನು ಬಿಡಿಸಲು ಕಾರಣರಾದವರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.