
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಆಂಜನೇಯ ಮತ್ತು ಬನ್ನಿಮಹಾಕಾಳಿ ದೇವಾಲಯದ ಆವರಣದಲ್ಲಿ ಅನ್ಯಕೋಮಿನ ಯುವಕ ಮೂತ್ರ ವಿಸರ್ಜನೆ ಮಾಡಿದ ಘಟನೆಯನ್ನು ಖಂಡಿಸಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗಸ್ಟ್ 26 ರಂದು ಶಿಗ್ಗಾಂವಿ ಬಂದ್ಗೆ ಕರೆ ನೀಡಿದ್ದಾರೆ.
ದೇವಾಲಯದ ಆವರಣದಲ್ಲಿ ವಿಕೃತಿ ಮೆರೆದ ಆರೋಪಿ ಜಾಫರ್ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಈ ಕೃತ್ಯದ ಹಿಂದೆ ಸ್ಥಳೀಯ ಮೌಲ್ವಿಗಳು ಹಾಗೂ ನಾಯಕರ ಷಡ್ಯಂತ್ರ ಅಡಗಿದೆ ಎಂದು ಮುತಾಲಿಕ್ ಆರೋಪಿಸಿದ್ದಾರೆ.
ಘಟನೆಯ ನಂತರ ಶ್ರೀರಾಮಸೇನೆ ಮತ್ತು ಹಿಂದೂ ಸಂಘಟನೆಗಳ ನೂರಾರು ಕಾರ್ಯಕರ್ತರು ಗೋಮೂತ್ರದ ಮೂಲಕ ಆಂಜನೇಯ ದೇವಾಲಯವನ್ನು ಸ್ವಚ್ಛಗೊಳಿಸಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.