
ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಜರುಗಲಿರುವ ಹಾಸನಾಂಬೆ ಮಹೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್ ಬೆಂಗಳೂರು ಮತ್ತು ಹಾಸನ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದ್ದಾರೆ.
ಕಳೆದ ವರ್ಷ ನೆಟ್‌ವರ್ಕ್ ಸಮಸ್ಯೆ ಉಂಟಾಗಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ದೇವಸ್ಥಾನದ ಸುತ್ತಮುತ್ತ ಭಕ್ತರಿಗಾಗಿ ಸಂಪೂರ್ಣ ಉಚಿತ ವೈಫೈ ಸೌಲಭ್ಯ ಕಲ್ಪಿಸಲು ನಿರ್ಧರಿಸಿದೆ.
ಈ ಮಹೋತ್ಸವವನ್ನು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ 'ಇನ್‌ಕ್ರೆಡಿಬಲ್ ಇಂಡಿಯಾ' ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಸೇರ್ಪಡೆಗೊಳಿಸಲಾಗಿದೆ.