
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾವಲ್ಕೋಟ್ನಲ್ಲಿ ಕಳೆದ ಐದು ತಿಂಗಳಿಂದ ನಡೆಯುತ್ತಿದ್ದ ಪ್ರತಿಭಟನೆಯನ್ನು ತೆರವುಗೊಳಿಸಲು ಭದ್ರತಾ ಪಡೆಗಳು ಗುರುವಾರ ಕಾರ್ಯಾಚರಣೆ ನಡೆಸಿವೆ.
ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಕ್ಕಳು ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸಾವಿನ ಸಂಖ್ಯೆ ಅಧಿಕೃತವಾಗಿ ದೃಢಪಟ್ಟಿಲ್ಲ.
ಜಂಟಿ ಅವಾಮಿ ಕ್ರಿಯಾ ಸಮಿತಿಯು ವಿಶ್ವಸಂಸ್ಥೆ ಸೇರಿದಂತೆ ಅಂತರರಾಷ್ಟ್ರೀಯ ಸಂಸ್ಥೆಗಳು ಮಧ್ಯಪ್ರವೇಶಿಸಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ.