
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಪತ್ರ ಬರೆದು, ಕಾವೇರಿ ನೀರಿನ ಹಂಚಿಕೆಯಲ್ಲಿ ಕರ್ನಾಟಕದ ರೈತರ ಹಿತಾಸಕ್ತಿ ಕಾಪಾಡಲು ಮನವಿ ಮಾಡಿದ್ದಾರೆ.
ಬೆಂಗಳೂರಿನ ಕುಡಿಯುವ ನೀರಿನ ಅಗತ್ಯ ಮತ್ತು ಮೇಕೆದಾಟು ಯೋಜನೆಗೆ ಸಹಕಾರ ನೀಡುವಂತೆ ಕೋರಿರುವ ವಿಜಯೇಂದ್ರ, ಎರಡೂ ರಾಜ್ಯಗಳ ನಡುವಿನ ಐತಿಹಾಸಿಕ ಬಾಂಧವ್ಯವನ್ನು ನೆನಪಿಸಿದ್ದಾರೆ.
ಕಾವೇರಿ ನೀರಿನ ವಿಷಯ ಚರ್ಚಿಸಲು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ವಿಜಯ್ ಬೆಂಗಳೂರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ಪತ್ರ ಮಹತ್ವ ಪಡೆದುಕೊಂಡಿದೆ.