
ಬಿಡದಿ ಟೌನ್ಶಿಪ್ ಯೋಜನೆಗೆ ಹೈಕೋರ್ಟ್ ಸಂಪೂರ್ಣ ತಡೆಯಾಜ್ಞೆ ನೀಡಿಲ್ಲ ಎಂದು ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಯೋಜನೆಯ ಇಡೀ ಭೂಸ್ವಾಧೀನ ಪ್ರಕ್ರಿಯೆ ಸ್ಥಗಿತಗೊಂಡಿಲ್ಲ ಎಂದು ಆಗಸ್ಟ್ 25ರ ವಿಚಾರಣೆಯಲ್ಲಿ ಹೈಕೋರ್ಟ್ ಆದೇಶ ನೀಡಿದೆ.
ರಿಟ್ ಅರ್ಜಿ ಸಲ್ಲಿಸಿದ ಕೆಲ ಭೂಮಾಲೀಕರ ಜಮೀನುಗಳಿಗೆ ಮಾತ್ರ ಪ್ರತ್ಯೇಕ ಕಾನೂನು ರಕ್ಷಣೆ ನೀಡಲಾಗಿದ್ದು, ಅವರ ಆಸ್ತಿಗಳಿಗೆ ಪರಿಹಾರ ಅವಾರ್ಡ್ ಸಿದ್ಧಪಡಿಸಲು ಸೂಚಿಸಲಾಗಿದೆ.