
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸಲ್ಲಿಕೆಯಾಗಿರುವ ಎರಡು ರಿಟ್ ಅರ್ಜಿಗಳ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ.
ಕಳೆದ ಹತ್ತು ತಿಂಗಳಲ್ಲಿ ಇತರ ಆಯುಕ್ತರ ಆಕ್ಷೇಪಣೆಗಳನ್ನು ಪರಿಗಣಿಸದೆ 14 ವಿವಾದಾತ್ಮಕ ಎಸ್ಐಆರ್ ನಿರ್ಧಾರಗಳನ್ನು ಏಕಪಕ್ಷೀಯವಾಗಿ ಕೈಗೊಂಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಜ್ಞಾನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಬೇಕು ಹಾಗೂ ವೋಟರ್ಸ್ ಹೆಸರುಗಳ ಡಿಲೀಟ್ ಬಗ್ಗೆ ತನಿಖೆ ನಡೆಸಲು ಎಸ್ಐಟಿ ರಚಿಸಬೇಕು ಎಂದು ಅರ್ಜಿಗಳು ಆಗ್ರಹಿಸಿವೆ.