
ಕೇರಳದ ವಯನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೈಸೂರಿನ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಜಲಾಶಯದಿಂದ ಹೊರಹರಿವನ್ನು ಹೆಚ್ಚಿಸಿರುವುದರಿಂದ ಬಿದರಹಳ್ಳಿ ಮತ್ತು ಎಚ್.ಡಿ. ಕೋಟೆ ನಡುವಿನ ಸಂಪರ್ಕ ಸೇತುವೆ ಮುಳುಗಡೆಯಾಗಿದೆ.
ಸೇತುವೆ ಮುಳುಗಡೆಯಿಂದ ಗ್ರಾಮಸ್ಥರು 15 ಕಿಲೋಮೀಟರ್ ಹೆಚ್ಚುವರಿ ದೂರ ಸುತ್ತಿ ಬರಬೇಕಾದ ಅನಿವಾರ್ಯತೆ ಎದುರಾಗಿದ್ದು, ಹೊಸ ಸೇತುವೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.