
ದೀಪಾವಳಿ ಹಬ್ಬದ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ನವೆಂಬರ್ 6ರಿಂದ 8ರವರೆಗೆ ಬೆಂಗಳೂರಿನಿಂದ 2,600 ಹೆಚ್ಚುವರಿ ವಿಶೇಷ ಬಸ್ಗಳನ್ನು ಕಾರ್ಯಾಚರಣೆಗೊಳಿಸಲು ಕೆಎಸ್ಆರ್ಟಿಸಿ ನಿರ್ಧರಿಸಿದೆ.
ನವೆಂಬರ್ 10 ಮತ್ತು 11ರಂದು ವಿವಿಧ ಕಡೆಗಳಿಂದ ಬೆಂಗಳೂರಿಗೆ ಹಿಂತಿರುಗಲು ಸಹ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಒಂದೇ ಟಿಕೆಟ್ನಲ್ಲಿ 4 ಅಥವಾ ಹೆಚ್ಚು ಪ್ರಯಾಣಿಕರು ಬುಕ್ ಮಾಡಿದರೆ ಶೇ 5 ಹಾಗೂ ಹೋಗಿ-ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದರೆ ಶೇ 10ರಷ್ಟು ರಿಯಾಯಿತಿ ಸಿಗಲಿದೆ.