
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಅಕ್ಟೋಬರ್ 29ರಂದು ಕರಾವಳಿಯ ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 28 ಹಾಗೂ 29ರಂದು ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ ರಾಜ್ಯದ ಗರಿಷ್ಠ ತಾಪಮಾನ 35.1 ಡಿಗ್ರಿ ಸೆಲ್ಸಿಯಸ್ ಹಾಗೂ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 13.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.