
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ನೇಮಕಾತಿ ಹಗರಣದ ವಿರುದ್ಧ ಶೀಘ್ರದಲ್ಲೇ ದೊಡ್ಡ ಮಟ್ಟದಲ್ಲಿ ಜಿರಳೆ ಹೋರಾಟ ಹಮ್ಮಿಕೊಳ್ಳುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಧಿಕೃತವಾಗಿ ಘೋಷಿಸಿದೆ.
ಅನ್ಯಾಯಕ್ಕೊಳಗಾದ ಮತ್ತು ವಂಚನೆಗೆ ಒಳಗಾದ ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಿರುವ ಪಕ್ಷವು ಕಾನೂನು ಹೋರಾಟ ಮತ್ತು ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.
ರಾಜ್ಯದ ಸರ್ಕಾರಿ ಶಾಲೆಗಳ ಶೋಚನೀಯ ದುಸ್ಥಿತಿ ಹಾಗೂ ಶೌಚಾಲಯಗಳ ಕೊರತೆ ಬಗ್ಗೆಯೂ ಸಿಜೆಪಿ ಕಳವಳ ವ್ಯಕ್ತಪಡಿಸಿದ್ದು, ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸುವುದಾಗಿ ಭರವಸೆ ನೀಡಿದೆ.