
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ಲಭಿಸಿದೆ.
ಈ ವಿಸ್ತರಣೆಯಿಂದ ಕಲಬುರಗಿ ಜಿಲ್ಲೆಗೆ ಒಟ್ಟು ಮೂರು ಸಚಿವ ಸ್ಥಾನಗಳು ಸಿಕ್ಕಂತಾಗಿದ್ದು, ಪ್ರಿಯಾಂಕ್ ಖರ್ಗೆ ಮತ್ತು ಶರಣಪ್ರಕಾಶ್ ಪಾಟೀಲ್ ಈಗಾಗಲೇ ಸಚಿವರಾಗಿದ್ದಾರೆ.
ಬೆಂಗಳೂರನ್ನು ಹೊರತುಪಡಿಸಿದರೆ ಅತಿ ಹೆಚ್ಚು ಸಚಿವ ಸ್ಥಾನಗಳನ್ನು ಪಡೆದ ಜಿಲ್ಲೆಯಾಗಿ ಕಲಬುರಗಿ ಹೊರಹೊಮ್ಮಿದ್ದು, ಅಜಯ್ ಸಿಂಗ್ ಅವರ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ.