
ಮಂಗಳೂರಿನ ಪಾಂಡೇಶ್ವರದ ಕನ್ವೆನ್ಷನ್ ಹಾಲ್ನಲ್ಲಿ ನಡೆದ ಕಾಲೇಜು ಸಮಾರಂಭದ ವೇಳೆ ಮೊದಲನೇ ಮಹಡಿಯ ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದು ಐವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆಗೆ ಭಾರಿ ಏಟು ಬಿದ್ದಿರುವ 16 ವರ್ಷದ ಮೊಹಮ್ಮದ್ ಶಮಾಜ್ ಬ್ರೈನ್ ಡೆಡ್ ಆಗಿ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪಾಂಡೇಶ್ವರ ಠಾಣೆಯ ಪೊಲೀಸರು, ಕಟ್ಟಡದ ಸುರಕ್ಷತೆ ಮತ್ತು ಆಯೋಜಕರ ನಿರ್ಲಕ್ಷ್ಯದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.