
ಉತ್ತರಾಖಂಡದ ಚಮೋಲಿ ಜಿಲ್ಲೆಯ ಪೀಪಲ್‌ಕೋಟಿ ಬಳಿ ನಿರ್ಮಾಣ ಹಂತದ ಜಲವಿದ್ಯುತ್ ಯೋಜನೆಯ ಸುರಂಗಕ್ಕೆ ದಿಢೀರನೆ ನೀರು ಮತ್ತು ಕಸದ ತ್ಯಾಜ್ಯ ನುಗ್ಗಿದ ಪರಿಣಾಮ 7 ಕಾರ್ಮಿಕರು ಮೃತಪಟ್ಟಿದ್ದಾರೆ.
ಗುರುವಾರ ಸಂಜೆ ನಡೆದ ಈ ದುರಂತದಲ್ಲಿ ಒಟ್ಟು 22 ಕಾರ್ಮಿಕರು ಸ್ಥಳದಲ್ಲಿದ್ದರು, ಅದರಲ್ಲಿ 14 ಮಂದಿ ಗಾಯಗೊಂಡಿದ್ದು ಅವರನ್ನು ಗೋಪೇಶ್ವರ ಮತ್ತು ಪೀಪಲ್‌ಕೋಟಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಜಾರ್ಖಂಡ್ ಮತ್ತು ಛತ್ತೀಸ್‌ಗಢದ ಸಂತ್ರಸ್ತ ಕಾರ್ಮಿಕರಿಗೆ ಸೂಕ್ತ ಚಿಕಿತ್ಸೆ ನೀಡುವ ಭರವಸೆ ನೀಡಿದ್ದಾರೆ.