
ವಿಜಯಪುರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ ಸೆಪ್ಟೆಂಬರ್ 10ರಿಂದ ಆರಂಭಗೊಂಡಿದೆ.
ಕರ್ನಾಟಕದ 11 ಜಿಲ್ಲೆಗಳಿಂದ ಸುಮಾರು 8,500 ಅಭ್ಯರ್ಥಿಗಳು ಈ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ.
ಜೂನ್ನಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ ಪರೀಕ್ಷೆಗಳಿಗೆ ಆಹ್ವಾನಿಸಲಾಗಿದೆ.