
ತರೀಕೆರೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಚಾಕೊನಹಳ್ಳಿ, ಲಕ್ಕವಳ್ಳಿ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಕಾರ್ಯಕರ್ತೆ ಹುದ್ದೆಗಳು ಮತ್ತು ಅಂಬೇಡ್ಕರ್ ನಗರ, ಬಸವಾಪುರ ಸೇರಿದಂತೆ ಹಲವು ಕಡೆ ಸಹಾಯಕಿ ಹುದ್ದೆಗಳು ಖಾಲಿ ಇವೆ.
ಆಸಕ್ತರು ಆಗಸ್ಟ್ 31ರ ಸಂಜೆ 5.30ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಆಫ್‌ಲೈನ್ ಮೂಲಕ ಸಲ್ಲಿಸಬೇಕು.