
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಆಗಸ್ಟ್ 23ರಂದು ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ 28 ಡಿಗ್ರಿ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದ್ದು, ಸಂಜೆಯ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.