
ಜಾಂಬಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಲೆಜೆಂಡ್ಸ್ ಲೀಗ್ನ ಮೊದಲ ಪಂದ್ಯದಲ್ಲಿ ಇಂಡಿಯಾ ರಾಯಲ್ಸ್ ತಂಡವು ಬಾಂಗ್ಲಾದೇಶ ಟೈಗರ್ಸ್ ವಿರುದ್ಧ 19 ರನ್ಗಳ ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಇಂಡಿಯಾ ರಾಯಲ್ಸ್ 20 ಓವರ್ಗಳಲ್ಲಿ 135 ರನ್ ಗಳಿಸಿದರೆ, ಬಾಂಗ್ಲಾ ತಂಡವು 116 ರನ್ಗಳಿಗೆ ಸೀಮಿತವಾಗಿ ಸೋಲೊಪ್ಪಿಕೊಂಡಿತು.
ಶದಾಬ್ ಜಕಾತಿ 25 ರನ್ ನೀಡಿ 3 ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದು, ಈ ಗೆಲುವಿನೊಂದಿಗೆ ಇಂಡಿಯಾ ರಾಯಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.