
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮತ್ತು ಮಧ್ಯವರ್ತಿ ಬಸವರಾಜ ಕನ್ನಾಳೆಯನ್ನು ಸಿಐಡಿ ಬಂಧಿಸಿದೆ.
ಪ್ರತಿ ಹುದ್ದೆಗೆ 40 ಲಕ್ಷದಿಂದ 80 ಲಕ್ಷ ರೂ. ವರೆಗೆ ಬೇಡಿಕೆಯಿಟ್ಟು 29ಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ಮುಂಗಡ ಹಣ ವಸೂಲಿ ಮಾಡಲಾಗಿದೆ.
ಪ್ರಕರಣದಲ್ಲಿ ಭಾಗಿಯಾದ 10 ಅಭ್ಯರ್ಥಿಗಳು ಅಪ್ರೂವರ್ ಆಗಲು ಮುಂದಾಗಿದ್ದು, ನ್ಯಾಯಾಲಯವು ಬಂಧಿತ ಆರೋಪಿಗಳನ್ನು 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿದೆ.