
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಆಗಸ್ಟ್ 13ರಂದು 5 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.